ಬಂಧನ
ಇಂಫಾಲ್: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿ ಇಬ್ಬರು ಸಿಬ್ಬಂದಿ ಸಾವಿಗೆ ಕಾರಣವಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಶಸ್ತ್ರಸಜ್ಜಿತ ಉಗ್ರರು ಇರುವ ಮಾಹಿತಿ ಮೇರೆಗೆ ಕಾಮೆಂಗ್ ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ತಂಡ ಮತ್ತು ಭದ್ರತಾ ಪಡೆಗಳು ಬುಧವಾರ ಮಧ್ಯಾಹ್ನ ವಿಶೇಷ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಪೀಪಲ್ಸ್ ಲಿಬರೇಷನ್ ಆರ್ಮಿಯ (ಪಿಎಲ್‌ಎ) ಮಾಜಿ ಸದಸ್ಯ ಖೋಮ್‌ಡ್ರಾಮ್ ಓಜಿತ್ ಸಿಂಗ್ (47) ಅನ್ನು ಬಂಧಿಸಲಾಗಿದೆ ಎಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಅವರು ಬುಧವಾರ ತಿಳಿಸಿದ್ದಾರೆ.
ಆರೋಪಿ ನೀಡಿದ ಮಾಹಿತಿ ಆಧರಿಸಿ, ದಾಳಿಯಲ್ಲಿ ಬಳಸಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.