ADVERTISEMENT

ಮೋದಿ, ಶಾ ಭೇಟಿಗೆ ದೆಹಲಿಗೆ ತೆರಳಿದ ಮಣಿಪುರ ಸಿಎಂ ಬಿರೇನ್‌ ಸಿಂಗ್

ಪಿಟಿಐ
Published 14 ಮೇ 2023, 13:48 IST
Last Updated 14 ಮೇ 2023, 13:48 IST
ಎನ್‌.ಬಿರೇನ್‌ ಸಿಂಗ್‌
ಎನ್‌.ಬಿರೇನ್‌ ಸಿಂಗ್‌   

ಇಂಫಾಲ: ಹಿಂಸಾಚಾರದಿಂದ ನಲುಗಿರುವ ಮಣಿಪುರದ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್ ಮತ್ತು ನಾಲ್ವರು ಸಂಪುಟ ಸದಸ್ಯರು ಭಾನುವಾರ ದೆಹಲಿಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ವಿಶ್ವಜಿತ್‌, ವೈ ಖೇಮ್‌ಚಂದ್‌, ಕೆ.ಗೋವಿಂದಾಸ್‌, ಪ್ರಸಂತ ಮತ್ತು ಬಿಜೆಪಿ ರಾಜ್ಯಾಧ್ಯಕ್ಷೆ ಶಾರದಾ ದೇವಿ ಅವರು ಸಿಂಗ್‌ ಅವರೊಂದಿಗೆ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿವೆ.

ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆ ವಿರುದ್ಧ ಬುಡಕಟ್ಟು ಸಮುದಾಯಗಳು ಸುಮಾರು 10 ಜಿಲ್ಲೆಗಳಲ್ಲಿ ಮೇ 3ರಂದು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯು ಹಿಂಸಾತ್ಮಕ ಸ್ವರೂಪ ತಾಳಿ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂಸಾಚಾರದಲ್ಲಿ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 231 ಮಂದಿ ಗಾಯಗೊಂಡಿದ್ದಾರೆ. ಧಾರ್ಮಿಕ ಸ್ಥಳಗಳೂ ಸೇರಿ 1,700 ಮನೆಗಳು ಸುಟ್ಟು ಬೂದಿಯಾಗಿವೆ ಎಂದು ಬಿರೇನ್‌ ಸಿಂಗ್‌ ಸೋಮವಾರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.