ADVERTISEMENT

Manipur Violence: ಮಣಿಪುರದ 5 ಕಣಿವೆ ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ

ಪಿಟಿಐ
Published 7 ಸೆಪ್ಟೆಂಬರ್ 2023, 9:51 IST
Last Updated 7 ಸೆಪ್ಟೆಂಬರ್ 2023, 9:51 IST
<div class="paragraphs"><p>‌ಸಾಂದರ್ಭಿಕ ಚಿತ್ರ</p></div>

‌ಸಾಂದರ್ಭಿಕ ಚಿತ್ರ

   

ಚಿತ್ರ: ಪಿಟಿಐ

ಇಂಫಾಲ: ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಕರ್ಫ್ಯೂ ಘೋಷಣೆ ಮಾಡಿದ ಮರುದಿನವೇ, ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ.

ADVERTISEMENT

ಜನರಿಗೆ ಆಹಾರ, ಔಷಧ ಸೇರಿ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ನೀಡುವ ಸಲುವಾಗಿ ಬೆಳಿಗ್ಗೆ 5 ರಿಂದ ಸಂಜೆ 6ರವರೆಗೆ ಕರ್ಪ್ಯೂ ಸಡಿಲಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬುಧವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯಲ್ಲಿ ಕರ್ಫ್ಯೂ ಸಡಿಲಿಕೆ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಫಾಲ ಪಶ್ಚಿಮ, ಇಂಫಾಲ ಪೂರ್ವ ಹಾಗೂ ಕಾಕ್‌ಚಿಂಗ್‌ ಜಿಲ್ಲೆಗಳಲ್ಲಿ ಗುರುವಾರ ಬೆಳಿಗ್ಗೆ 5ರಿಂದ ಸಂಜೆ 6 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ತೌಬಾಲ್ ಜಿಲ್ಲೆಯಲ್ಲಿ ಬೆಳಿಗ್ಗೆ 5 ರಿಂದ ರಾತ್ರಿ 8ರ ವರೆಗೆ ನಿರ್ಬಂಧ ಸಡಿಲಿಸಲಾಗಿದೆ.

ವಿಷ್ಣುಪುರ ಜಿಲ್ಲೆಯಲ್ಲಿ ಬೆಳಿಗ್ಗೆ 5 ರಿಂದ 11ರ ವರೆಗೆ ಕರ್ಫ್ಯೂ ನಿಯಮಗಳನ್ನು ಸರಳಗೊಳಿಸಲಾಗಿದೆ.

ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿದರೂ, ಅನುಮತಿ ಪಡೆಯದೆ ಒಟ್ಟು ಸೇರುವುದು, ಪ್ರತಿಭಟನೆ ಅಥವಾ ರ‍್ಯಾಲಿ ನಡೆಸುವುದಕ್ಕೆ ಅವಕಾಶ ಇಲ್ಲ ಎಂದು ಅಧಿಕೃತ ಆದೇಶದಲ್ಲಿ ಹೇಳಲಾಗಿದೆ.

ಮಂಗಳವಾರ ಈ ಐದೂ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.