
ಇಂಫಾಲ್: ಸೂಕ್ಷ್ಮ ವಿವರಗಳನ್ನು ವರದಿಯಲ್ಲಿ ಪ್ರಕಟಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಸ್ಥಳೀಯ ಪತ್ರಿಕೆಯೊಂದರ ಸಂಪಾದಕರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
‘ಹುಯೆನ್ ಲ್ಯಾನ್‌ಪಾವೊ’ ಪತ್ರಿಕೆ ಸಂಪಾದಕ ಧನಬೀರ್ ಮೈಬಮ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಬಂಧಿಸಲಾಗಿದ್ದ ಮೈಬಮ್ ಅವರಿಗೆ ಸ್ಥಳೀಯ ನ್ಯಾಯಾಲಯ ಭಾನುವಾರ ಜಾಮೀನು ನೀಡಿದೆ ಎಂದು ತಿಳಿಸಿದ್ದಾರೆ.
‘ಮೋರೆ ಪಟ್ಟಣದಲ್ಲಿ ಇತ್ತೀಚೆಗೆ ರಾಜ್ಯ ಪೊಲೀಸರು ಹಾಗೂ ಕುಕಿ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದರ ಬೆನ್ನಲ್ಲೇ ನಡೆದಿದ್ದ ಕೆಲ ಘಟನೆಗಳ ಕುರಿತು ಮೈಬಮ್ ಅವರು ವರದಿಯಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಅಧಿಕೃತ ಗೋಪ್ಯತಾ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು’ ಎಂದೂ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.