
ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಈ ಸಮಿತಿಯ ಅಧಿಕಾರಾವಧಿ ಕಳೆದ ವರ್ಷ ಜುಲೈನಲ್ಲಿ ಕೊನೆಗೊಂಡಿತ್ತು.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಮಿತಿಯ ಅವಧಿಯನ್ನು ಬುಧವಾರ ವಿಸ್ತರಿಸಿದೆ. ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ಸಮಿತಿಯು ಇದುವರೆಗೆ 42 ವರದಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ ಎಂದು ಪೀಠಕ್ಕೆ ತಿಳಿಸಲಾಯಿತು.
2023ರ ಆಗಸ್ಟ್ 7ರಂದು ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರದ ಮೇಲ್ವಿಚಾರಣೆ ಮಾಡಲು ಮೂವರು ನಿವೃತ್ತ ಮಹಿಳಾ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿಯನ್ನು ಸ್ಥಾಪಿಸುವಂತೆ ಆದೇಶಿಸಿತ್ತು. ಜೊತೆಗೆ ಕ್ರಿಮಿನಲ್ ಪ್ರಕರಣಗಳ ತನಿಖೆಯ ಮೇಲ್ವಿಚಾರಣೆ ನಡೆಸಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ತೇಯ ಪಡಸಾಲ್ಗಿಕರ್ ಅವರನ್ನು ಕೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.