
ಮಣಿಪುರ ಹಿಂಸಾಚಾರ (ಸಂಗ್ರಹ ಚಿತ್ರ)
ಪಿಟಿಐ ಚಿತ್ರ
ಚುರಾಚಂದಪುರ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಬುಧವಾರ ತುಯಿಬೊಂಗ್ ಪ್ರದೇಶದಲ್ಲಿರುವ ಮನೆಯಿಂದ ರಿಷಿಕಾಂತ ಸಿಂಗ್ ಎಂಬ ವ್ಯಕ್ತಿಯನ್ನು ಮನೆಯಿಂದ ಅಪಹರಿಸಿದ ಬಂಡುಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಿಂದ ಇಲ್ಲಿನ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಹಾಗೂ ಪ್ರತಿಭಟನೆಗಳು ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ.
ಹತ್ಯೆ ಮಾಡಿದವರನ್ನು ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಸಂಘಟನೆಗೆ ಸೇರಿದವರು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಮುದಾಯಗಳ ನಡುವಿನ ಶಾಂತಿ ಮಾತುಕತೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವಾಗಲೇ ಈ ಘಟನೆ ನಡೆದಿದೆ.
2023ರಲ್ಲಿ ಆರಂಭವಾದ ಮಣಿಪುರ ಹಿಂಸಾಚಾರದಲ್ಲಿ ಇಲ್ಲಿಯವರೆಗೂ 260ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನ ಮನೆ–ಮಠ ಕಳೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.