ADVERTISEMENT

ಮಣಿಪುರ | 10 ಉಗ್ರರ ಹತ್ಯೆ; ಮುಂದುವರಿದ ಕಾರ್ಯಾಚರಣೆ

ಪಿಟಿಐ
Published 15 ಮೇ 2025, 1:56 IST
Last Updated 15 ಮೇ 2025, 1:56 IST
<div class="paragraphs"><p>ಮಣಿಪುರ ಪೊಲೀಸರು</p></div>

ಮಣಿಪುರ ಪೊಲೀಸರು

   

ಸಾಂದರ್ಭಿಕ ಚಿತ್ರ (ಪಿಟಿಐ ಚಿತ್ರ)

ಇಂಫಾಲ: ಮಣಿಪುರದ ಚಂದೇಲ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತರಾಗಿದ್ದಾರೆ.

ADVERTISEMENT

ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು  ಅಧಿಕಾರಿಗಳು ಹೇಳಿದ್ದಾರೆ.

ಈ ಕುರಿತು ಸೇನೆಯ ಪೂರ್ವ ಕಮಾಂಡ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಂದೇಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಉಗ್ರರ ಚಲನವಲನಗಳ ಬಗ್ಗೆ ಗುಪ್ತಚರ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು (ಬುಧವಾರ) ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಶಂಕಿತರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಒಟ್ಟು 10 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.