ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ನವದೆಹಲಿ: ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಂಬಂಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಪ್ರತಿಕ್ರಿಯೆ ನೀಡಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯ ವಿಚಾರವಾಗಿದೆ. ಅಲ್ಲಿ ಬಹಳ ಕಾಲದಿಂದ ಸಮಸ್ಯೆ ಇದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅದೇ ಸಂದರ್ಭದಲ್ಲಿ ದೇಶದಲ್ಲಿ ಎಲ್ಲ ಕಡೆ 'ಮತ ಕಳ್ಳತನ' ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ರಾಹುಲ್ ಉಲ್ಲೇಖಿಸಿದ್ದಾರೆ.
'ಮಣಿಪುರದಲ್ಲಿ ಸಮಸ್ಯೆ ಬಹಳ ದಿನಗಳಿಂದ ಇದೆ. ಪ್ರಧಾನಿ ಅಲ್ಲಿಗೆ ಹೋಗುತ್ತಿರುವುದು ಒಳ್ಳೆಯ ವಿಚಾರ. ಆದರೆ ದೇಶದ ಪ್ರಮುಖ ವಿಷಯ 'ಮತ ಕಳ್ಳತನ' ಆಗಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಮತ ಕಳ್ಳತನ ನಡೆದಿದೆ. ಕರ್ನಾಟಕದ ಬಗ್ಗೆ ನಾವು ಪುರಾವೆ ನೀಡಿದ್ದೇವೆ. ಎಲ್ಲ ಕಡೆ ಜನರು ಮತ ಕಳ್ಳತನದ ಬಗ್ಗೆಯೇ ಹೇಳುತ್ತಿದ್ದಾರೆ' ಎಂದು ಅವರು ಹೇಳಿದ್ದಾರೆ.
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ (ಸೆ.13) ಭೇಟಿ ನೀಡಲಿದ್ದು ,ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆ ಇದೆ.
ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಪ್ರಧಾನಿ ಭೇಟಿ ನೀಡುತ್ತಿದ್ದಾರೆ. ಮೋದಿ ಭೇಟಿ ಕಾರಣಕ್ಕೆ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.