ADVERTISEMENT

ಸಂಪುಟ ಸ್ಥಾನಗಳಿಗೆ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ: ಕೇಜ್ರಿವಾಲ್ ಅಂಗೀಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2023, 13:23 IST
Last Updated 28 ಫೆಬ್ರುವರಿ 2023, 13:23 IST
ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್
ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್   

ನವದೆಹಲಿ: ದೆಹಲಿ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರು ರಾಜ್ಯ ಸಂಪುಟದಲ್ಲಿ ತಮ್ಮ ಸ್ಥಾನಗಳಿಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ಅವರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದು, ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು ಸತತ 8 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ನಿನ್ನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಕೆ.ನಾಗ್ಪಾಲ್, ಸಿಸೋಡಿಯಾ ಅವರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದರು.

ADVERTISEMENT

ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಮನೀಶ್ ಸಿಸೋಡಿಯಾ ಅವರು ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್‌ 17ರಂದು ವಿಚಾರಣೆ ನಡೆಸಲಾಗಿತ್ತು. ಅಷ್ಟೇ ಅಲ್ಲ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನೂ ಶೋಧಿಸಲಾಗಿತ್ತು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ತಿಹಾರ್‌ ಜೈಲಿನಲ್ಲಿದ್ದಾರೆ.

ಜೈನ್‌ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.