ADVERTISEMENT

ರಾಜ್ಯಸಭೆ ಚುನಾವಣೆ: ಮನಮೋಹನ್‌ ಸಿಂಗ್‌ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2019, 12:00 IST
Last Updated 13 ಆಗಸ್ಟ್ 2019, 12:00 IST
   

ಜೈಪುರ: ರಾಜ್ಯಸಭೆಗೆ ರಾಜಸ್ಥಾನದಿಂದ ನಡೆಯಲಿರುವ ಉಪಚುನಾವಣೆಗೆ ಸ್ಪರ್ಧಿಸಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು ನಾಲ್ಕು ಸೆಟ್‌ಗಳಲ್ಲಿ ನಾಮಪತ್ರವನ್ನು ಸಲ್ಲಿಸಿದರು.

‘ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್‌ ಪ‍ಕ್ಷ ಮತ್ತು ರಾಜಸ್ಥಾನದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದ ಜನರ ಏಳಿಗೆಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದರು. ಬಿಜೆಪಿಯ ಮದನ್‌ಲಾಲ್‌ ಸೈನಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ.

86 ವರ್ಷದ ಸಿಂಗ್‌ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌, ಪಕ್ಷದ ಪ್ರಧಾನ ಕಾರ್ಯದರ್ಶಿ ಅವಿನಾಶ್‌ ಪಾಂಡೆ, ರಾಜ್ಯದ ಸಂಸದೀಯ ಸಚಿವ ಶಾಂತಿ ಧಾರಿವಾಲ್‌ ಅವರೂ ಇದ್ದರು.

ADVERTISEMENT

ರಾಜಸ್ಥಾನ 200 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ 100 ಸದಸ್ಯರನ್ನು ಹೊಂದಿದೆ. 12 ಪಕ್ಷೇತರರು ಮತ್ತು ಬಿಎಸ್‌ಪಿ ಶಾಸಕರ ಬೆಂಬಲವನ್ನು ಕಾಂಗ್ರೆಸ್‌ ಹೊಂದಿದೆ. ಹೀಗಾಗಿ, ಸಿಂಗ್ ಅವರು ರಾಜ್ಯಸಭೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.