ADVERTISEMENT

ಮನಮೋಹನ ಸಿಂಗ್‌ ನಿಧನ: ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಹುಲ್‌, ಖರ್ಗೆ

ಪಿಟಿಐ
Published 27 ಡಿಸೆಂಬರ್ 2024, 2:20 IST
Last Updated 27 ಡಿಸೆಂಬರ್ 2024, 2:20 IST
<div class="paragraphs"><p>ಮನಮೋಹನ ಸಿಂಗ್‌ ನಿಧನ</p></div>

ಮನಮೋಹನ ಸಿಂಗ್‌ ನಿಧನ

   

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ(ಏಮ್ಸ್‌) ಮನಮೋಹನ ಸಿಂಗ್‌ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಯಿತು. ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. 

ADVERTISEMENT

ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮನಮೋಹನ ಸಿಂಗ್‌ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

ಕಾಂಗ್ರೆಸ್‌ ನಾಯಕಿಯರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಮನಮೋಹನ ಸಿಂಗ್‌ ಅವರಿಗೆ ಪತ್ನಿ ಗುರುಶರಣ್ ಸಿಂಗ್‌ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.