ADVERTISEMENT

ಮನಮೋಹನ ಸಿಂಗ್ ದೇಶಕ್ಕೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯ: ಆರ್‌ಎಸ್‌ಎಸ್​​​

ಪಿಟಿಐ
Published 27 ಡಿಸೆಂಬರ್ 2024, 6:59 IST
Last Updated 27 ಡಿಸೆಂಬರ್ 2024, 6:59 IST
<div class="paragraphs"><p>ಮನಮೋಹನ ಸಿಂಗ್</p></div>

ಮನಮೋಹನ ಸಿಂಗ್

   

– ರಾಯಿಟರ್ಸ್ ಚಿತ್ರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ. ಭಾರತಕ್ಕೆ ಅವರು ಕೊಡುಗೆಗಳು ಸದಾ ಸ್ಮರಣೀಯ ಎಂದು ಹೇಳಿದ್ದಾರೆ.

ADVERTISEMENT

ಹೆಸರಾಂತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ ಸಿಂಗ್ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ. ಅಗಲಿದ ಆತ್ಮಕ್ಕೆ ಸದ್ಗತಿ ದೊರೆಯಲೆಂದು ನಾವು ಭಗವಂತನನ್ನು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ ಸಿಂಗ್‌ (92) ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್‌) ಗುರುವಾರ ನಿಧನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.