ADVERTISEMENT

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್‌ ಸಿನ್ಹಾ ನೇಮಕ

ಏಜೆನ್ಸೀಸ್
Published 6 ಆಗಸ್ಟ್ 2020, 20:17 IST
Last Updated 6 ಆಗಸ್ಟ್ 2020, 20:17 IST
ಮನೋಜ್‌ ಸಿನ್ಹಾ
ಮನೋಜ್‌ ಸಿನ್ಹಾ   

ನವದೆಹಲಿ: ಉತ್ತರ ಪ್ರದೇಶ ಬಿಜೆಪಿಯ ಹಿರಿಯ ನಾಯಕ ಮನೋಜ್ ಸಿನ್ಹಾ ಅವರನ್ನು ಗುರುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ಮೊದಲ ರಾಜಕೀಯ ನಾಯಕ ಮನೋಜ್ ಸಿನ್ಹಾ ಆಗಿದ್ದಾರೆ.

‘ವಿಕಾಸ ಪುರುಷ’ ಎಂದೇ ಜನಪ್ರಿಯರಾಗಿರುವ ಮನೋಜ್ ಸಿನ್ಹಾ ಅವರು ಮೂರು ಅವಧಿಗೆ ಲೋಕಸಭಾ ಸದಸ್ಯರಾಗಿದ್ದರು. 2016ರಲ್ಲಿ ಕೇಂದ್ರ ಸಂಪರ್ಕ ಖಾತೆಯ ರಾಜ್ಯ ಸಚಿವರೂ ಆಗಿದ್ದರು. ಸಿವಿಲ್ ಎಂಜಿನಿಯರಿಂಗ್‌ ಪದವೀಧರರಾಗಿರುವ ಸಿನ್ಹಾ ಅವರು 1996ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ 1999 ಮತ್ತು 2014ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೂ ಅವರ ಹೆಸರು ಒಮ್ಮೆ ಕೇಳಿ ಬಂದಿತ್ತು.

ADVERTISEMENT

ಜಮ್ಮು–ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಜಿ.ಸಿ.ಮುರ್ಮು ಅವರು ಬುಧವಾರ ತಮ್ಮ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಮುರ್ಮು ಅವರು ಸಿಎಜಿ ಹುದ್ದೆಗೆ ನೇಮಕವಾಗಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.