ADVERTISEMENT

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅಧಿಕಾರ ಸ್ವೀಕಾರ

ಪಿಟಿಐ
Published 7 ಆಗಸ್ಟ್ 2020, 13:03 IST
Last Updated 7 ಆಗಸ್ಟ್ 2020, 13:03 IST
ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಶುಕ್ರವಾರ ಶ್ರೀನಗರದ ರಾಜಭವನದಲ್ಲಿ ಲೆಫ್ಟಿನಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದರು
ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಶುಕ್ರವಾರ ಶ್ರೀನಗರದ ರಾಜಭವನದಲ್ಲಿ ಲೆಫ್ಟಿನಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದರು   

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಆಗಿ ಕೇಂದ್ರದ ಮಾಜಿ ಸಚಿವ ಮನೋಜ್ ಸಿನ್ಹಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಈ ಹುದ್ದೆ ಅಲಂಕರಿಸಿದ ಮೊದಲ ರಾಜಕೀಯ ನಾಯಕ ಇವರು. ಮುಖ್ಯ ನ್ಯಾಯಮೂರ್ತಿ ಗೀತಾ ಮಿಠ್ಠಲ್ ಅವರು ರಾಜಭವನದಲ್ಲಿ ಅಧಿಕಾರದ ಪ್ರತಿಜ್ಞಾವಿಧಿ ಬೋಧಿಸಿದರು.

'ಆಗಸ್ಟ್ 5, ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಪ್ರಮುಖವಾದ ದಿನ. ದೇಶದ ಮುಖ್ಯವಾಹಿನಿಗೆ ಸೇರಿದ ದಿನ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಅನೇಕ ಕಾರ್ಯಗಳು ಒಂದು ವರ್ಷದಲ್ಲಿ ಆಗಿರುವುದನ್ನು ನಾನು ಕೇಳಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸಲು ನಾನು ಬಯಸುತ್ತೇನೆ' ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.