ADVERTISEMENT

ಓಮೈಕ್ರಾನ್: ತುರ್ತು ಸಭೆ ನಡೆಸಲಿರುವ ಕೇಂದ್ರ ಆರೋಗ್ಯ ಸಚಿವ ಮಾಂಡವೀಯ

ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2021, 16:36 IST
Last Updated 2 ಡಿಸೆಂಬರ್ 2021, 16:36 IST
ಮನ್‌ಸುಖ್ ಮಾಂಡವೀಯ
ಮನ್‌ಸುಖ್ ಮಾಂಡವೀಯ   

ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಯಾಗಿ ಆತಂಕ ಸೃಷ್ಟಿಸಿರುವ ‘ಓಮೈಕ್ರಾನ್’ ಭಾರತದಲ್ಲೂ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಶೀಘ್ರವೇ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಈಗಾಗಲೇ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ತಪಾಸಣೆ ಕೇಂದ್ರಗಳನ್ನು ಹೆಚ್ಚಿಸಲಾಗಿದ್ದು, ವಿದೇಶಗಳಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಟ್ರಾವೆಲ್ ಹಿಸ್ಟರಿಯನ್ನು ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಒದಗಿಸಬೇಕು ಎಂದು ಸಚಿವರು ಆದೇಶಿಸಿದ್ಧಾರೆ.

ಓಮೈಕ್ರಾನ್ ವಿಷಯವಾಗಿ ಹಾಗೂ ಅಂತರರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಸಭೆಯಲ್ಲಿಮಾಂಡವೀಯ ಪರಿಶೀಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.