ರೈಲು ಬೋಗಿಗಳು ಹಳಿ ತಪ್ಪಿರುವ ದೃಶ್ಯ
ಸಾಂದರ್ಭಿಕ ಚಿತ್ರ
ಭುವನೇಶ್ವರ: ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಎಸ್‌ಎಂವಿಟಿ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್ಪಿದ್ದು, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗುಲಿ ಬಳಿಯ ನೆರ್ಗುಂಡಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಅಶೋಕ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ.
ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ. 8455885999 ಮತ್ತು 8991124238 ಈ ಸಹಾಯವಾಣಿಗಳಿಗೆ ತುರ್ತು ಕರೆಗಳನ್ನು ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.