ADVERTISEMENT

ಹರಿಯಾಣ: ಪಂಕ್ಚರ್ ಆಗಿ ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ, 6 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2024, 5:19 IST
Last Updated 11 ಮಾರ್ಚ್ 2024, 5:19 IST
   

ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ.

ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಆಗ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.