ಅಪಘಾತ
–ಪ್ರಾತಿನಿಧಿಕ ಚಿತ್ರ
ವಿಕಾರಾಬಾದ್: ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು (ಮಂಗಳವಾರ) ಬೆಳಗಿನ ಜಾವ 1.45ರ ಸುಮಾರಿಗೆ ಟ್ರಕ್‌ಗೆ ಬಸ್ ಡಿಕ್ಕೆ ಹೊಡೆದಿದೆ. ಬಸ್‌ನಲ್ಲಿದ್ದವರು ಶಹಾಬಾದ್‌ನಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು ಎಂದು ವಿಕಾರಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಕೆ. ನಾರಾಯಣ ರೆಡ್ಡಿ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೈದರಾಬಾದ್‌ನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.