ದೋಣಿ
ಕಟಿಹಾರ್ (ಬಿಹಾರ): ಹದಿನೇಳು ಮಂದಿಯನ್ನು ಹೊತ್ತು ಸಾಗಿದ್ದ ದೋಣಿಯು ಕಟಿಹಾರ್ ಜಿಲ್ಲೆಯ ಗೋಲಾಘಾಟ್ ಎಂಬಲ್ಲಿ ಭಾನುವಾರ ಮಗುಚಿ ಬಿದ್ದಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದುವರೆಗೆ ಹತ್ತು ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ ಬಹುತೇಕರು ತಾವಾಗಿಯೇ ಈಜಿ ದಡ ಮುಟ್ಟುವಲ್ಲಿ ಯಶಸ್ವಿಯಾದರು. ನಾಲ್ವರು ನಾಪತ್ತೆಯಾಗಿದ್ದು, ಶೋಧಕಾರ್ಯ ನಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಇಬ್ಬರನ್ನು ಪವನ್ ಕುಮಾರ್ (60) ಹಾಗೂ ಸುಧೀರ್ ಮಂಡಲ್ (70) ಎಂದು ಗುರುತಿಸಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.