ADVERTISEMENT

ಬಿಹಾರ | ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ: ಮೂವರು ಸಾವು

ಪಿಟಿಐ
Published 24 ಅಕ್ಟೋಬರ್ 2023, 1:47 IST
Last Updated 24 ಅಕ್ಟೋಬರ್ 2023, 1:47 IST
<div class="paragraphs"><p>ಸಾವು (ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಗೋಪಾಲ್‌ಗಂಜ್: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಐದು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ.

ADVERTISEMENT

ನಗರದ ರಾಜದಳದ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ.

'ಪ್ರಸಾದ' ಸ್ವೀಕರಿಸುವ ವೇಳೆ ಕಾಲ್ತುಳಿತ ಉಂಟಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.