ADVERTISEMENT

ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿ ಕುಸಿತ: ಮೂವರು ಸಾವು, ಹಲವರು ಸಿಲುಕಿರುವ ಶಂಕೆ

ಕಲ್ಲಿದ್ದಲು ಗಣಿಯೊಂದರಲ್ಲಿ ಮಣ್ಣು ಕುಸಿದು 3 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಣಿಯಲ್ಲಿ ಸಿಲುಕಿರುವ ಘಟನೆ ಜಾರ್ಖಂಡ್‌ನ ಧನಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಪಿಟಿಐ
Published 9 ಜೂನ್ 2023, 11:14 IST
Last Updated 9 ಜೂನ್ 2023, 11:14 IST
ಜಾರ್ಖಂಡ್‌ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ
ಜಾರ್ಖಂಡ್‌ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ   

ಧನಬಾದ್: ಕಲ್ಲಿದ್ದಲು ಗಣಿಯೊಂದರಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಘಟನೆ ಜಾರ್ಖಂಡ್‌ನ ಧನಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ (BCCL) ಎಂಬ ಈ ಕಲ್ಲಿದ್ದಲು ಗಣಿ 'ಭೌರಾ ಕೊಲೈರಿ' ಎಂಬ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ಕುಸಿದಿರುವ ಗಣಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ ಎಂಬ ಮಾಹಿತಿ ತಕ್ಷಣಕ್ಕೆ ಸಿಕ್ಕಿಲ್ಲ. ಹಲವರು ಸಿಲುಕಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳೀಯರ ನೆರವಿನಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಧನಬಾದ್ ಜಿಲ್ಲೆಯ ಡಿಎಸ್‌ಪಿ ಅಭಿಷೇಕ್ ಕುಮಾ ಹೇಳಿದ್ದಾರೆ.

ADVERTISEMENT

ಭೌರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.