
ಪಿಟಿಐ
ಸ್ಫೋಟ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ಸ್ಫೋಟ ಸಂಭವಿಸಿ ಎಂಟು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.
ಫರೀದಾಬಾದ್‌ನಲ್ಲಿ ಈಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ಮಾದರಿಯನ್ನು ಸಾಗಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ಉಗ್ರ ಡಾ. ಮುಜಮ್ಮಿಲ್ ಗನಿಯ ನಿವಾಸದಿಂದ ವಶಪಡಿಸಿಕೊಂಡಿದ್ದ 360 ಕೆ.ಜಿ. ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಫರೀದಾಬಾದ್‌ನಿಂದ ಇಲ್ಲಿಗೆ ತಂದಿದ್ದರು. ವಶಪಡಿಸಿಕೊಂಡ ಅಷ್ಟೂ ಸ್ಫೋಟಕಗಳನ್ನು ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಿಡಲಾಗಿತ್ತೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.