ಕಾನ್ಪುರ: ಇಲ್ಲಿನ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್‌ನಲ್ಲಿದ್ದ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬರುತ್ತಿದ್ದ ಬಸ್, ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯ ಇನ್ನೊಂದು ಬದಿಗೆ ಪಲ್ಟಿ ಹೊಡೆದು ಕಂದಕಕ್ಕೆ ಬಿದ್ದಿದೆ ಎಂದು ಕಾನ್ಪುರ ಹೊರವಲಯದ ಪೊಲೀಸ್ ವರಿಷ್ಠಾಧಿಕಾರಿ ಅಶ್ತ್‌ಬುಜಾ ಪ್ರಸಾದ್ ಸಿಂಗ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.