ADVERTISEMENT

ಭೋಪಾಲ್| ಕೋಲ್‌ ಮಹಾಕುಂಭ ಯಾತ್ರಾರ್ಥಿಗಳ ಬಸ್‌ ಅಪಘಾತ: 6 ಸಾವು, 50 ಜನರಿಗೆ ಗಾಯ

ಐಎಎನ್ಎಸ್
Published 25 ಫೆಬ್ರುವರಿ 2023, 2:58 IST
Last Updated 25 ಫೆಬ್ರುವರಿ 2023, 2:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭೋಪಾಲ್(ಮಧ್ಯಪ್ರದೇಶ):ಟ್ರಕ್ ಮತ್ತು ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, ಸುಮಾರು 50 ಜನರು ಗಾಯಗೊಂಡಿರುವ ಘಟನೆ ಇಲ್ಲಿನ ರೇವಾ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಬಸ್‌ನಲ್ಲಿದ್ದ ಜನರು ‘ಮಾತಾ ಶಬರಿ’ ಜನ್ಮದಿನದ ಅಂಗವಾಗಿ ಕೋಲ್ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಸತ್ನಾ ಜಿಲ್ಲೆಗೆ ತೆರಳಿದ್ದರು, ಅಲ್ಲಿಂದ ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರೇವಾ ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ಮತ್ತು ಎಸ್ಪಿ ನವೀನ್ ಭಾಸೀನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್‌ ತಿಳಿಸಿದೆ.

ADVERTISEMENT

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪರಿಸ್ಥಿತಿಯನ್ನು ಅವಲೋಕಿಸಿದರು. ಗಾಯಗೊಂಡವರಿಗೆ ವೈದ್ಯಕೀಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿದ್ಧಿ ಸಂಸದ ರಿತಿ ಪಾಠಕ್ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಕೂಡ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಆಯೋಜಿಸಿದ್ದ ಕೋಲ್ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಅವರು ಬಂದಿದ್ದರು. ಆದ್ದರಿಂದ ರಾಜ್ಯ ಸರ್ಕಾರ ಮೃತ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿ ಆಗ್ರಹಿಸಿದರು.

ಕೋಲ್ ಮಹಾಕುಂಭ ಮೇಳವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.