ಭದ್ರತಾ ಸಿಬ್ಬಂದಿ
–ಪಿಟಿಐ ಚಿತ್ರ
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡವು ತೆಲಂಗಾಣ–ಛತ್ತೀಸಗಢ ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟಾ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇದುವರೆಗೆ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.