ADVERTISEMENT

ಆಪರೇಷನ್ ಸಿಂಧೂರಕ್ಕೆ ಮೊದಲ ದಿನವೇ ಹಲವು ಪಾಕ್ ಉಗ್ರರು ಸತ್ತಿರುವ ಶಂಕೆ

Operation Sindoor: ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಮೇ 2025, 23:15 IST
Last Updated 6 ಮೇ 2025, 23:15 IST
<div class="paragraphs"><p>ಆಪರೇಷನ್ ಸಿಂಧೂರಕ್ಕೆ ಮೊದಲ ದಿನವೇ ಹಲವು ಪಾಕ್ ಉಗ್ರರು ಸತ್ತಿರುವ ಶಂಕೆ</p></div>

ಆಪರೇಷನ್ ಸಿಂಧೂರಕ್ಕೆ ಮೊದಲ ದಿನವೇ ಹಲವು ಪಾಕ್ ಉಗ್ರರು ಸತ್ತಿರುವ ಶಂಕೆ

   

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಆರಂಭಿಸಿದೆ.

ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿದೆ. ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.

ADVERTISEMENT

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ದಾಳಿ ನಡೆಸಿದೆ. ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಕಾರ್ಯಾಚರಣೆಗೆ ʼಆಪರೇಷನ್‌ ಸಿಂಧೂರ" ಎಂದು ಹೆಸರಿಡಲಾಗಿದೆ.

ಟ್ವೀಟ್‌ಗಳ ಮಹಾಪೂರ: ನಿರ್ದಿಷ್ಟ ದಾಳಿಯ ಸುದ್ದಿ ತಿಳಿಯುತ್ತಲೇ, ʼಎಕ್ಸ್‌ʼನಲ್ಲಿ ಟ್ವೀಟ್‌ಗಳ ಮಹಾಪೂರವೇ ಹರಿಯುತ್ತಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ ಕೇಂದ್ರದ ಹಲವು ಸಚಿವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಬಳಕೆದಾರರು ಕೂಡ ಈ ಬಗ್ಗೆ ಪೋಸ್ಟ್‌ಗಳು, ಹಾಗೂ ದಾಳಿಯ ವಿಡಿಯೊ ತುಣುಕುಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನ್ಯಾಯ ದೊರಕಿತು: ನಿರ್ದಿಷ್ಟ ದಾಳಿ ನಡೆಸಿರುವ ಬಗ್ಗೆ ಭಾರತೀಯ ಸೇನೆಯು "ಎಕ್ಸ್‌"ನಲ್ಲಿ ಟ್ವೀಟ್‌ ಮಾಡಿದ್ದು, ʼಆಪರೇಷನ್‌ ಸಿಂಧೂರʼ ಎಂಬ ಚಿತ್ರದ ಪೋಸ್ಟ್‌ ಜೊತೆಗೆ #ಪಹಲ್ಗಾಮ್‌ಭಯೋತ್ಪಾದನಾ ದಾಳಿ ನ್ಯಾಯ ದೊರಕಿತು ಜೈ ಹಿಂದ್‌ ಎಂದು ಬರೆದಿದೆ.

ಭಾರತ ಪಾಕಿಸ್ತಾನಗಳ ನಡುವೆ ಸೇನಾ ಸಮರದ ನಡೆಯಲಿದೆ ಎಂದು ಚರ್ಚೆಯಾಗಿತ್ತು. ಅದಕ್ಕೆ ಪೂರಕ ಎಂಬಂತೆ ಎರಡು ರಾಷ್ಟ್ರಗಳು ಸಮರಾಭ್ಯಾಸ ಸೇರಿದಂತೆ ಸೇನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸಿದ್ದವು. ಶತ್ರು ರಾಷ್ಟ್ರದಿಂದ ದಾಳಿ ನಡೆದ ಪಕ್ಷದಲ್ಲಿ ನಾಗರಿಕರಿಗೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಿದ್ಧತೆಯನ್ನು ಕೈಗೊಳ್ಳುವುದಕ್ಕಾಗಿ ಬುಧವಾರ ನಾಗರಿಕ ಸ್ವರಕ್ಷಣೆ ತಾಲೀಮು ನಡೆಸಲು ಕೇಂದ್ರ ಗೃಹಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ರಾಜ್ಯಗಳು ಸಿದ್ಧತೆಯನ್ನೂ ನಡೆಸಿದ್ದವು. ಇದರ ನಡುವೆಯೇ ಭಾರತೀಯ ಸೇನೆಯು ಮಂಗಳವಾರ ರಾತ್ರಿ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.