ADVERTISEMENT

ತಮಿಳುನಾಡು: ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶ, 11 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2022, 7:31 IST
Last Updated 27 ಏಪ್ರಿಲ್ 2022, 7:31 IST
ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವ ದೃಶ್ಯ –ಪಿಟಿಐ ಚಿತ್ರ
ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವ ದೃಶ್ಯ –ಪಿಟಿಐ ಚಿತ್ರ    

ಚೆನ್ನೈ: ತಂಜಾವೂರು ಜಿಲ್ಲೆಯಕಳಿಮೆಡುವಿನ ಅಪ್ಪಾರ್ ಮಡಂ ದೇವಸ್ಥಾನದರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಅಪ್ಪಾರ್ ಮಡಂ ದೇವಸ್ಥಾನದ ರಥೋತ್ಸವ ಮುಗಿಸಿಹಿಂತಿರುಗುತ್ತಿದ್ದ ಸಂದರ್ಭದಲ್ಲಿಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆಎಂದು ಮೂಲಗಳು ತಿಳಿಸಿವೆ.

ADVERTISEMENT

‘ರಥಕ್ಕೆ ಹೈವೋಲ್ಟೇಜ್ ವಿದ್ಯುತ್ ತಂತಿತಗುಲಿದ ಪರಿಣಾಮ ಬಂಡಿ ಹೊತ್ತಿ ಉರಿದಿದೆ. ರಥದ ಸಮೀಪ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗ್ರಾಮಸ್ಥರು ಅನುಮತಿಯಿಲ್ಲದೆ ರಥೋತ್ಸವ ನಡೆಸಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಸ್ಥರಿಗೆ ಸಂತಾಪ ವ್ಯಕ್ತಪಡಿಸಿದ್ದು, ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ರಾಷ್ಟ್ರಪತಿ, ಪ್ರಧಾನಿ ಸಂತಾಪ:ತಂಜಾವೂರು ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕುರಿತುರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ‍್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಸಂತಾಪವ್ಯಕ್ತಪಡಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರವನ್ನುಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF)ನೀಡಲಾಗುವುದು ಎಂದು ಕೇಂದ್ರ ಸರ್ಕಾರತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.