ಭುವನೇಶ್ವರ: ಒಡಿಶಾದ ಗಂಜಾಂ ಜಿಲ್ಲೆಯ ಭಂಜನಗರ್ ಬ್ಲಾಕ್ ವ್ಯಾಪ್ತಿಯ ಕೇಸರಿ ಪಟ್ನಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಕೂಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲಿ ಸಾವಿಗೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.