ADVERTISEMENT

‘ಅಗ್ನಿಪಥ’ ವಿರೋಧಿ ಹೋರಾಟದ ವೇಳೆ ಹಿಂಸಾಚಾರ: ಹೈದರಾಬಾದ್‌ನಲ್ಲಿ ವ್ಯಕ್ತಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2022, 11:12 IST
Last Updated 17 ಜೂನ್ 2022, 11:12 IST
ರೈಲು ಬೋಗಿಗಳಿಗೆ ಬೆಂಕಿ ಹಚ್ಚಿರುವ ದೃಶ್ಯ –ಪಿಟಿಐ ಚಿತ್ರ
ರೈಲು ಬೋಗಿಗಳಿಗೆ ಬೆಂಕಿ ಹಚ್ಚಿರುವ ದೃಶ್ಯ –ಪಿಟಿಐ ಚಿತ್ರ    

ಹೈದರಾಬಾದ್‌: ಕೇಂದ್ರ ಸರ್ಕಾರ ಪ್ರಕಟಿಸಿರುವ ಸೈನಿಕರ ನೇಮಕಾತಿಯ ಹೊಸ ‘ಅಗ್ನಿಪಥ ಯೋಜನೆ’ ವಿರುದ್ಧ ತೆಲಂಗಾಣ, ಬಿಹಾರ, ಹರಿಯಾಣ, ಸಿಕಂದರಾಬಾದ್‌ ಸೇರಿದಂತೆ ವಿವಿಧೆಡೆ ಶುಕ್ರವಾರ ಭಾರಿ ಪ್ರತಿಭಟನೆ ನಡೆದಿದೆ.

ಹೈದರಾಬಾದ್‌ನಲ್ಲಿ ‘ಅಗ್ನಿಪಥ’ ಯೋಜನೆ ವಿರೋಧಿಸಿ ನಡೆಸುತ್ತಿರುವ ಹೋರಾಟ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ವ್ಯಕ್ತಿಯೊಬ್ಬರು ಮೃತ್ತಪಟ್ಟಿರುವುದಾಗಿ ವರದಿಯಾಗಿದೆ.

ಪ್ರತಿಭಟನೆ ವೇಳೆ ಗಾಯಗೊಂಡಿದ್ದ 13 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಗಾಂಧಿ ಆಸ್ಪತ್ರೆಯ ಅಧಿಕಾರಿ ರಾಜಾರಾಮ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.

ADVERTISEMENT

ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ವನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ನೇಮಕಾತಿ ಯೋಜನೆ ವಿರುದ್ಧ ದೇಶದಾದ್ಯಂತ ಆಕಾಂಕ್ಷಿಗಳು ಆಕ್ರೋಶಗೊಂಡಿದ್ದು, ಹಲವೆಡೆ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.