ADVERTISEMENT

ದೆಹಲಿಯ ಮೂರು ಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: 12 ಮಂದಿಯ ರಕ್ಷಣೆ

ಪಿಟಿಐ
Published 19 ಜುಲೈ 2022, 13:01 IST
Last Updated 19 ಜುಲೈ 2022, 13:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯ ‘ನ್ಯೂ ಅಶೋಕ ನಗರ’ದ ಮೂರು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 3.34ರ ವೇಳೆಗೆ ಕಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

‘ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ಪತ್ತೆಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈವರೆಗೆ ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.