ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರಮುಂಜಾನೆನಿರ್ಮಾಣ ಹಂತದ ಮೇಲ್ಸೇತುವೆಯ ಒಂದು ಭಾಗ ಕುಸಿದು ಬಿದ್ದು 14 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಉಪನಗರದ ಎಂಟಿಎನ್‌ಎಲ್ ಜಂಕ್ಷನ್‌ನಲ್ಲಿ ಮುಂಜಾನೆ 4.41ರ ಹೊತ್ತಿಗೆ ಘಟನೆ ನಡೆದಿದೆ.
ಗಾಯಾಳು ಕಾರ್ಮಿಕರನ್ನು ಸ್ಥಳೀಯ ವಿ.ಎನ್. ದೇಸಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಲಭಿಸಿದತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.ಮೇಲ್ಸೇತುವೆಯಲ್ಲಿ ಕಾರ್ಮಿಕರು ಕೆಲಸ ನಿರತರಾಗಿದ್ದಾಗಗರ್ಡರ್ (ಸೇತುವೆಯ ದಾಟು) ಕುಸಿದು ಬಿದ್ದಿದೆ.ಘಟನೆ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಇಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮೇಲ್ಸೇತುವೆಯನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.