ADVERTISEMENT

ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಪಿಟಿಐ
Published 29 ನವೆಂಬರ್ 2023, 9:56 IST
Last Updated 29 ನವೆಂಬರ್ 2023, 9:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸೂರತ್: ಗುಜರಾತ್‌ನ ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 24 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಚಿನ್ ಇಂಡಸ್ಟ್ರೀಯಲ್ ಪ್ರದೇಶದಲ್ಲಿ ರಾಸಾಯನಿಕ ಘಟಕದಲ್ಲಿ ಮಂಗಳವಾರ ಮಧ್ಯರಾತ್ರಿ ಘಟನೆ ನಡೆದಿದೆ. ರಾಸಾಯನಿಕ ಸೋರಿಕೆಯಿಂದಾಗಿ ಸ್ಟೋರೆಜ್ ಟ್ಯಾಂಕ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ತಿಳಿಸಿದ್ದಾರೆ.

ADVERTISEMENT

ಗಾಯಾಳು ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಮಾರು 15 ಅಗ್ನಿಶಾಮಕ ವಾಹನಗಳು ಒಂಬತ್ತು ತಾಸುಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಇಂದು ಬೆಳಿಗ್ಗೆ 11ರ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.