ರಘುನಂದನ್ ರಾವ್
-ಪಿಟಿಐ ಚಿತ್ರ
ಹೈದರಾಬಾದ್: ಬಿಜೆಪಿ ಸಂಸದ ಎಂ. ರಘುನಂದನ್ ರಾವ್ ಅವರಿಗೆ ಮಧ್ಯಪ್ರದೇಶದ ಮಾವೋವಾದಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಕಚೇರಿ ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆ ರಾವ್ ಅವರು ಖಾಸಗಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬೆದರಿಕೆ ಕರೆಗಳ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಸಿಬ್ಬಂದಿ ತಿಳಿಸಿದ್ದಾರೆ.
ತೆಲಂಗಾಣದ ಮೇಡಕ್‌ನ ಲೋಕಸಭಾ ಸದಸ್ಯರಾದ ರಾವ್ ಅವರಿಗೆ ಜೂನ್ 23ರಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಕರೆ ಮಾಡಿದವರು ತಮ್ಮನ್ನು ಮಧ್ಯಪ್ರದೇಶದ ಮಾವೋವಾದಿಗಳು ಎಂದು ಹೇಳಿಕೊಂಡಿದ್ದಾರೆ. ಈ ಕುರಿತು ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ರಘುನಂದನ್ ರಾವ್ ಅವರ ಭದ್ರತೆಗಾಗಿ ಶಸ್ತ್ರಸಜ್ಜಿತ ಸಿಬ್ಬಂದಿ ಮತ್ತು ಬೆಂಗಾವಲು ವಾಹನವನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.