ಸಾಂದರ್ಭಿಕ ಚಿತ್ರ
–ಪಿಟಿಐ ಚಿತ್ರ
ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಗುಂಪಿನ ಕನಿಷ್ಠ ಮೂವರು ಸದಸ್ಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾರ್ಖಂಡ್ ಜಾಗ್ವಾರ್ ಮತ್ತು ಗುಮ್ಲಾ ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಮತ್ತು ಜಾರ್ಖಂಡ್ ಜನ ಮುಕ್ತಿ ಪರಿಷತ್‌ನ(ಜೆಜೆಎಂಪಿ) ಮಾವೋವಾದಿ ಗುಂಪಿನ ಸದಸ್ಯರ ನಡುವಿನ ಗುಂಡಿನ ಚಕಮಕಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಷ್ಣುಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆಯಿತು.
‘ಗುಂಡಿನ ಚಕಮಕಿಯಲ್ಲಿ ಮೂವರು ಜೆಜೆಎಂಪಿ ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಸ್ಥಳದಿಂದ ಮೂರು ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ಎಂದು ಐಜಿ (ಕಾರ್ಯಾಚರಣೆ) ಮತ್ತು ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್ ರಾಜ್.ಎಸ್ ಪಿಟಿಐಗೆ ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.