ADVERTISEMENT

ಮರಾಠಾ ಮೀಸಲಾತಿಯ ನಾಯಕ ವಿನಾಯಕ್ ಮೇಟೆ ನಿಧನ

ಪಿಟಿಐ
Published 14 ಆಗಸ್ಟ್ 2022, 9:42 IST
Last Updated 14 ಆಗಸ್ಟ್ 2022, 9:42 IST
ಅಪಘಾತಕ್ಕಿಡಾದ ಕಾರು
ಅಪಘಾತಕ್ಕಿಡಾದ ಕಾರು   

ಮುಂಬೈ: ಶಿವಸಂಗ್ರಾಮ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಮಾಜಿ ಸದಸ್ಯ ವಿನಾಯಕ್ ಮೇಟೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಪುಣೆ–ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಇಲ್ಲಿನರಾಯಗಡ ಜಿಲ್ಲೆಯ ರಸಾಯನಿ ಪೊಲೀಸ್ ಠಾಣೆ ವ್ಯಾಪ್ತಿಯ ಮಡಪ್ ಗ್ರಾಮದ ಬಳಿ ಬೆಳಗ್ಗೆ 5 ಗಂಟೆ ಸಮಯದಲ್ಲಿ ಅಪಘಾತ ಸಂಭವಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಮರಾಠಾ ಮೀಸಲಾತಿಯ ನಾಯಕರಾಗಿದ್ದ ಅವರು ಹಲವು ಹೋರಾಟಗಳ ಮೂಲಕ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿ ನಾಯಕರು ಸತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.