ADVERTISEMENT

Maratha Quota: ಜರಾಂಗೆ ಆಜಾದ್ ಮೈದಾನ ಖಾಲಿ ಮಾಡುವಂತೆ ಮುಂಬೈ ಪೊಲೀಸ್ ನೋಟಿಸ್

ಪಿಟಿಐ
Published 2 ಸೆಪ್ಟೆಂಬರ್ 2025, 4:00 IST
Last Updated 2 ಸೆಪ್ಟೆಂಬರ್ 2025, 4:00 IST
<div class="paragraphs"><p>ಮನೋಜ್‌ ಜರಾಂಗೆ</p></div>

ಮನೋಜ್‌ ಜರಾಂಗೆ

   

(ಪಿಟಿಐ ಚಿತ್ರ)

ಮುಂಬೈ: ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಮನೋಜ್‌ ಜರಾಂಗೆ ಅವರು ಆಜಾದ್ ಮೈದಾನವನ್ನು ಖಾಲಿ ಮಾಡುವಂತೆ ಮುಂಬೈ ಪೊಲೀಸರು ಇಂದು (ಮಂಗಳವಾರ) ನೋಟಿಸ್ ಜಾರಿಗೊಳಿಸಿದ್ದಾರೆ.

ADVERTISEMENT

ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವವರು ಬಾಂಬೆ ಹೈಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಪೊಲೀಸರು ವಿಧಿಸಿದ್ಗ ಪ್ರತಿಭಟನೆ ಪೂರ್ವ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜರಾಂಗೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಮರಾಠಿಗರಿಗೆ ಮೀಸಲಾತಿ ಒತ್ತಾಯಿಸಿ ಜರಾಂಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ.

ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂಬುದು ಅವರ ಆಗ್ರಹವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.