ಮೇರಿ ಕೋಮ್
ಶಿಲ್ಲಾಂಗ್: ಆರು ಭಾರಿ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಅವರ ದೆಹಲಿ ನಿವಾಸದಲ್ಲಿ ಶನಿವಾರ ಕಳ್ಳತನ ಪ್ರಕರಣ ನಡೆದಿದೆ.
ಮೇರಿ ಅವರು ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳಲು ಮೇಘಾಲಯಕ್ಕೆ ತೆರಳಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ದೆಹಲಿಯಲ್ಲಿರುವ ತನ್ನ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ ಎಂದು ಮ್ಯಾರಥಾನ್ ಆಯೋಜಕರ ಬಳಿ ಕೋಮ್ ಹೇಳಿದ್ದಾರೆ.
ಯಾವೆಲ್ಲ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ ಮತ್ತು ಏನೆಲ್ಲಾ ಹಾನಿಯಾಗಿದೆ ಎಂಬ ಅಂಶ ಇನ್ನಷ್ಟೇ ತಿಳಿಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಣಿಪುರ ಮೂಲದವರಾದ ಕೋಮ್ ಅವರು ಉತ್ತಮ ಅಥ್ಲೀಟ್ ಕೂಡಾ ಹೌದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.