ADVERTISEMENT

ಕೋವಿಡ್ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ, ಉಲ್ಲಂಘನೆಗೆ ₹ 500 ದಂಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2022, 6:50 IST
Last Updated 11 ಆಗಸ್ಟ್ 2022, 6:50 IST
   

ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಿಯಮ ಮೀರಿದರೆ ₹ 500 ದಂಡ ವಿಧಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ನಾಲ್ಕು ಚಕ್ರದ ವಾಹನಗಳಲ್ಲಿ ಪ್ರಯಾಣಿಸುವವವರಿಗೆ ದಂಡವು ಅನ್ವಯಿಸುವುದಿಲ್ಲ ಎಂದುಅಧಿಸೂಚನೆಯ ನಿಬಂಧನೆಯಲ್ಲಿ ತಿಳಿಸಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಬುಧವಾರ, ದೆಹಲಿಯಲ್ಲಿ ಕೋವಿಡ್‌ನಿಂದ 8 ಸಾವು ಸಂಭವಿಸಿವೆ. ಸುಮಾರು 180 ದಿನಗಳಲ್ಲೇ ಇದು ಅತ್ಯಧಿಕ ಸಾವಿನ ಸಂಖ್ಯೆಯಾಗಿದೆ. 2,146 ಹೊಸ ಪ್ರಕರಣಗಳು ಮತ್ತು ಶೇಕಡ 17.83 ರಷ್ಟು ದೈನಂದಿನ ಪಾಸಿಟಿವಿಟಿ ದರ ದಾಖಲಾಗಿದೆ.

ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದ್ದು, 5,549 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 2,495 ಪ್ರಕರಣಗಳು ವರದಿಯಾಗಿದ್ದವು.

ಏಪ್ರಿಲ್‌ನಲ್ಲಿ, ದೆಹಲಿ ಸರ್ಕಾರವು ಮಾಸ್ಕ್ ಕಡ್ಡಾಯ ಆದೇಶವನ್ನು ತೆಗೆದುಹಾಕಿತ್ತು. ಆದರೆ, ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ ಮತ್ತು ಉಲ್ಲಂಘನೆಗೆ ದಂಡವನ್ನು ವಿಧಿಸಲು ಮತ್ತೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.