ADVERTISEMENT

India Covid-19 Updates: ಹೊಸ ಕೋವಿಡ್‌ ಪ್ರಕರಣಗಳಲ್ಲಿ ಭಾರಿ ಇಳಿಕೆ; 6 ಸಾವು 

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 6:14 IST
Last Updated 11 ಏಪ್ರಿಲ್ 2022, 6:14 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 861 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 6 ಜನರು ಸಾವಿಗೀಡಾಗುವುದರೊಂದಿಗೆ ಒಟ್ಟು 5,21,691 ಜನರು ಸೋಂಕಿನಿಂದ ಈವರೆಗೆ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 4,30,36,132ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,058ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಒಟ್ಟು ಸೋಂಕು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.03ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.19 ರಷ್ಟಿದ್ದರೆ, ಮರಣ ಪ್ರಮಾಣ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.