ADVERTISEMENT

ಕೋಲ್ಕತ್ತ: ಐದು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ

ಪಿಟಿಐ
Published 20 ಜನವರಿ 2019, 13:34 IST
Last Updated 20 ಜನವರಿ 2019, 13:34 IST
ಅಗ್ನಿ ಅನಾಹುತ ಸಂಭವಿಸಿರುವ ಕಟ್ಟಡ –ಪಿಟಿಐ ಚಿತ್ರ
ಅಗ್ನಿ ಅನಾಹುತ ಸಂಭವಿಸಿರುವ ಕಟ್ಟಡ –ಪಿಟಿಐ ಚಿತ್ರ   

ಕೋಲ್ಕತ್ತ: ಇಲ್ಲಿನ ಗರಿಯಾಹಟ್‌ ಪ್ರದೇಶದ ಐದು ಅಂತಸ್ತಿನ ಕಟ್ಟಡವೊಂದರಲ್ಲಿ ಭಾನುವಾರ ಬೆಳಗಿನ ಜಾವ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.

ವಸತಿ ಕಟ್ಟಡದ ತಳ ಅಂತಸ್ತಿನಲ್ಲಿದ್ದ ಬಟ್ಟೆಯಂಗಡಿಗೆ ಬೆಂಕಿ ತಗುಲಿದ್ದು, ಅನಂತರ ಸಮೀಪದ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ 19 ವಾಹನಗಳು ತಲುಪಿ ಬೆಂಕಿ ನಂದಿಸಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಟ್ಟಡಕ್ಕೆ ಲಿಫ್ಟ್‌ ವ್ಯವಸ್ಥೆ ಇರಲಿಲ್ಲ. ಜನರು ಮೆಟ್ಟಿಲು ಇಳಿದು ಕಟ್ಟಡದಿಂದ ಹೊರ ಬಂದಿದ್ದಾರೆ ಎಂದೂ ತಿಳಿಸಿದ್ದಾರೆ.

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.