ADVERTISEMENT

ಕೋಲ್ಕತ್ತ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬೆಂಕಿ: 250 ರೋಗಿಗಳ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2018, 3:43 IST
Last Updated 3 ಅಕ್ಟೋಬರ್ 2018, 3:43 IST
   

ಕೊಲ್ಕತ್ತ: ನಗರದ ಕೊಲ್ಕತ್ತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದ್ದು 250ಕ್ಕೂ ಅಧಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಚುರುಕಾಗಿ ಸಾಗಿದೆ. ಎಲ್ಲ ರೋಗಿಗಳೂ ಕ್ಷೇಮವಾಗಿದ್ದಾರೆ. ಬೆಂಕಿಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯ ಫಾರ್ಮಸಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು.

ADVERTISEMENT

ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಲವು ಕಟ್ಟಡಗಳಿವೆ. ಬೆಂಕಿ ಕಾಣಿಸಿಕೊಂಡ ನಂತರ ಹಲವು ರೋಗಿಗಳನ್ನು ಸ್ಟ್ರೆಚರ್‌ಗಳಲ್ಲಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ರೋಗಿಗಳ ಸಂಬಂಧಿಕರು ಸಲೈನ್‌ ಡ್ರಿಪ್‌ನ ಬಾಟಲಿಗಳನ್ನು ಹಿಡಿದುಕೊಂಡಿದ್ದರು. ಕೆಲ ರೋಗಿಗಳು ನೆಲದ ಮೇಲೆ ಮಲಗಿದ್ದರು.

ಕೊಲ್ಕತ್ತ ರಾಷ್ಟ್ರೀಯ ವೈದ್ಯಕೀಯ ಕಾಲೇಜು ದೇಶದ ಹಳೆಯ ಆಸ್ಪತ್ರೆಗಳಲ್ಲಿ ಒಂದು. 1948ರಿಂದ ಇದು ಕಾರ್ಯನಿರ್ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.