ADVERTISEMENT

ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಪಿಟಿಐ
Published 21 ಜುಲೈ 2022, 9:27 IST
Last Updated 21 ಜುಲೈ 2022, 9:27 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೆಶನಾಲಯದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಮತ್ತು ಸಚಿನ್ ಪೈಲಟ್ ಸೇರಿದಂತೆ ಕೆಲ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳನ್ನು ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರತಿಭಟಿಸುವುದು ನಮ್ಮ ಹಕ್ಕು. ಅದನ್ನೂ ತಡೆಯಲಾಗುತ್ತಿದೆ ಎಂದು ಸಚಿನ್ ಪೈಲಟ್ ದೂರಿದ್ದಾರೆ.

ADVERTISEMENT

‘ಇ.ಡಿ ದುರ್ಬಳಕೆ ನಿಲ್ಲಿಸಿ’ ಎಂಬ ಘೋಷವಾಕ್ಯವಿದ್ದ ಬಿತ್ತಿಪತ್ರಗಳನ್ನು ಹಿಡಿದಿದ್ದ ನಾಯಕರು ಸಂಸತ್ ಭವನದ ಆವರಣದಲ್ಲೂ ಪ್ರತಿಭಟನ ನಡೆಸಿದರು.

ಎಐಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದರು ಮತ್ತು ಸಿಡಬ್ಲ್ಯುಸಿ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೆ ಎದುರೂ ಸಹ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇದರ ಜೊತೆಗೆ ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.