ADVERTISEMENT

ಟಾಟಾ ಎಲೆಕ್ಟ್ರಾನಿಕ್ಸ್ ವಸತಿನಿಲಯದ ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 16:13 IST
Last Updated 5 ನವೆಂಬರ್ 2025, 16:13 IST
   

ಚೆನ್ನೈ: ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್‌ ಲಿಮಿಟೆಡ್‌ನ ವಸತಿನಿಲಯದ ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆಯಾದ ಕಾರಣ ಕಂಪನಿಯ ನೂರಾರು ಮಹಿಳಾ ಸಿಬ್ಬಂದಿ ಮಂಗಳವಾರ ರಾತ್ರಿ ಬೃಹತ್‌ ಪ್ರತಿಭಟನೆ ನಡೆಸಿದರು.

‘ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಿರುವ ಸಹಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಶೌಚಾಲಯದಲ್ಲಿ ಕ್ಯಾಮೆರಾ ಇರುವುದು ಭಾನುವಾರ ಬೆಳಿಗ್ಗೆ ಮಹಿಳಾ ಸಿಬ್ಬಂದಿಯೊಬ್ಬರ ಗಮನಕ್ಕೆ ಬಂದಿದ್ದು, ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ಒಡಿಶಾ ಮೂಲದ ನೀಲು ಕುಮಾರಿ(22) ಎಂಬವರು ಕ್ಯಾಮೆರಾ ಇಟ್ಟಿರುವ ಸಿಬ್ಬಂದಿ ಎಂಬುವುದು ಆಂತರಿಕ ತನಿಖೆಯಿಂದ ತಿಳಿದು ಬಂದಿತ್ತು. ಆದರೆ ಅವರ ವಿರುದ್ಧ ಕಂಪನಿ ಯಾವುದೇ ಕ್ರಮಕೈಗೊಂಡಿರಲಿಲ್ಲ.

ADVERTISEMENT

ಇದನ್ನು ಖಂಡಿಸಿ ಮಹಿಳಾ ಸಿಬ್ಬಂದಿ ವಸತಿನಿಲಯದ ಆವರಣದಲ್ಲಿ ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ವಸತಿನಿಲಯದ ಎಲ್ಲ ಶೌಚಾಲಯಗಳಲ್ಲಿ ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ.

‘ಕುಮಾರಿ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ. ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತನ ಒತ್ತಡದ ಕಾರಣಕ್ಕೆ ಕ್ಯಾಮೆರಾ ಇಟ್ಟಿದ್ದು, ಆದರೆ ಈವರೆಗೆ ಯಾವುದೇ ದೃಶ್ಯಗಳನ್ನು ಹಂಚಿಕೊಂಡಿಲ್ಲ ಎಂದು ಆರೋಪಿ ತಿಳಿಸಿದ್ದಾರೆ’ ಎಂಬುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.