ADVERTISEMENT

ನೇಣು ಬಿಗಿದ ಸ್ಥಿತಿಯಲ್ಲಿ ಐಐಟಿ ಸಹಾಯಕ ಪ್ರಾಧ್ಯಾಪಕನ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2022, 14:40 IST
Last Updated 10 ಡಿಸೆಂಬರ್ 2022, 14:40 IST
.
.   

ಗುವಾಹಟಿ: ಐಐಟಿ ಗುವಾಹಟಿಯ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರೊಬ್ಬರ ಮೃತದೇಹ ಮನೆಯೊಳಗೆ ಫ್ಯಾನ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಮೀರ್ ಕಮಲ್‌ (47) ಮೃತಪಟ್ಟವರು. ‘ಸಮೀರ್‌ ಅವರ ಮನೆಯಿಂದ ದುರ್ವಾಸನೆ ಬರುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದು,ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಕೊಠಡಿಯೊಳಗೆ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ವಿವರಿಸಿದ್ದಾರೆ.

ನವದೆಹಲಿ ನಿವಾಸಿ ಸಮೀರ್ ಅವರು ಅವಿವಾಹಿತರಾಗಿದ್ದರು ಎಂದೂ ತಿಳಿಸಿದ್ದಾರೆ.

ADVERTISEMENT

‘ಸಮೀರ್‌ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.