ನವದೆಹಲಿ: ಮಥುರಾ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ವಿವಾದದಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು (ಎಎಸ್‌ಐ) ಪ್ರತಿವಾದಿಗಳನ್ನಾಗಿಸಲು ಹಿಂದೂ ಅರ್ಜಿದಾರರಿಗೆ ಅವಕಾಶ ನೀಡಿದ ಹೈಕೋರ್ಟ್‌ನ ಕ್ರಮ ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಎಎಸ್‌ಐ ಮತ್ತು ಕೇಂದ್ರ ಗೃಹ ಸಚಿವಾಲಯವನ್ನು ಪ್ರತಿವಾದಿಗಳನ್ನಾಗಿಸಲು ಅಲಹಾಬಾದ್ ಹೈಕೋರ್ಟ್ ಮಾರ್ಚ್ 5ರಂದು ಅವಕಾಶ ಕಲ್ಪಿಸಿತ್ತು. ಎರಡು ಅರ್ಜಿಗಳಲ್ಲಿ ತಿದ್ದುಪಡಿ ತರುವುದಕ್ಕೆ ಕೂಡ ಹೈಕೋರ್ಟ್ ಒಪ್ಪಿತ್ತು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು, ಅರ್ಜಿಗಳಲ್ಲಿ ತಿದ್ದುಪಡಿ ತರುವುದಕ್ಕೆ ಒಪ್ಪಿಗೆ ನೀಡಿರುವುದರಲ್ಲಿ ಮೇಲ್ನೋಟಕ್ಕೆ ಯಾವುದೇ ತಪ್ಪು ಇಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.