ADVERTISEMENT

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮರಳಿದ ಟಿಎಂಸಿ ಸಂಸದೆ ಮೌಸಮ್ ನೂರ್‌

ಪಿಟಿಐ
Published 3 ಜನವರಿ 2026, 16:03 IST
Last Updated 3 ಜನವರಿ 2026, 16:03 IST
   

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ, ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಮೌಸಮ್ ನೂರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದಾರೆ. 

ಪಕ್ಷದ ಪಶ್ಚಿಮ ಬಂಗಾಳ ಉಸ್ತುವಾರಿಗಳಾದ ಜೈರಾಮ್ ರಮೇಶ್, ಗುಲಾಮ್ ಅಹ್ಮದ್ ಮೀರ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಶು‌ಭಂಕರ್ ಸರ್ಕಾರ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. 

ಪಕ್ಷಕ್ಕೆ ಮರಳಿದ ನಂತರ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳಕ್ಕೆ ಬದಲಾವಣೆ ಬೇಕಿದೆ. ಅದು ನನ್ನಿಂದಲೇ ಆರಂಭವಾಗಲಿ. ನಾನು ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಮರಳಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ನೂರ್‌ ಅವರ ರಾಜ್ಯಸಭಾ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದ್ದು, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಲ್ದಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. 

2009 ಮತ್ತು 2019ರ ಅವಧಿಯಲ್ಲಿ ಅವರು ಮಾಲ್ದಾ ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಪತ್ರಿನಿಧಿಸಿದ್ದರು. ಅಲ್ಲದೆ, ಪಶ್ಚಿಮ ಬಂಗಾಳದ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.