ಲಖನೌ: ‘ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಜನ್ಮಭೂಮಿ ವಿವಾದಕ್ಕೆ ತೆರೆ ಎಳೆದು, ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿದ್ದು ಸುಪ್ರೀಂ ಕೋರ್ಟ್. ಹಾಗಾಗಿ, ಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್‌ಗೆ ಸಲ್ಲಬೇಕು‘ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು,‘ಅಯೋಧ್ಯೆಯು ಎಲ್ಲಾ ಧರ್ಮದವರ ಪವಿತ್ರ ಸ್ಥಳವಾಗಿದೆ. ಇದು ಎಲ್ಲರಿಗೂ ತಿಳಿದ ವಿಷಯ. ರಾಮಮಂದಿರ ಹಾಗೂ ಬಾಬ್ರಿ ಮಸೀದಿಯ ಭೂ ವಿವಾದದಿಂದಾಗಿ ಈ ಸ್ಥಳ ಸುದ್ದಿಯಲ್ಲಿತ್ತು. ಹಲವು ವರ್ಷಗಳ ಈ ವಿವಾದಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಈ ವಿವಾದವನ್ನು ರಾಜಕೀಯಗೊಳಿಸಲು ಹೊರಟಿದ್ದ ಕೆಲ ಪಕ್ಷಗಳ ಪ್ರಯತ್ನಕ್ಕೂ ಅಂತ್ಯ ಹಾಡಿದೆ’ ಎಂದು ಹೇಳಿದ್ದಾರೆ.
‘ಸುಪ್ರೀಂಕೋರ್ಟ್ ತೀರ್ಪು, ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಹಾದಿಯನ್ನು ಸುಗಮಗೊಳಿಸಿದೆ. ನಮ್ಮ ಪಕ್ಷವು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆವು. ಅದಕ್ಕೆ ಬದ್ಧರಾಗಿದ್ದೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.