ADVERTISEMENT

ಮಾಯಾವತಿ ಮಾಜಿ ಕಾರ್ಯದರ್ಶಿ ₹230 ಕೋಟಿ ಆಸ್ತಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 18:22 IST
Last Updated 24 ಸೆಪ್ಟೆಂಬರ್ 2019, 18:22 IST

ನವದೆಹಲಿ: ನಿವೃತ್ತ ಐಎಎಸ್‌ ಅಧಿಕಾರಿ ನೇತರಾಮ್‌ ಅವರ ₹230 ಕೋಟಿ ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಮಂಗಳವಾರ ಜಪ್ತಿ ಮಾಡಿಕೊಂಡಿದೆ.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿ ನೇತರಾಮ್‌ ಕಾರ್ಯನಿರ್ವಹಿಸಿದ್ದರು.

ದೆಹಲಿ, ನೊಯಿಡಾ, ಕೋಲ್ಕತ್ತ ಮತ್ತು ಮುಂಬೈನಲ್ಲಿ 19 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.