ADVERTISEMENT

ಪಕ್ಷ, ರಾಜಕೀಯ ಬದಿಗಿಟ್ಟು ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡೋಣ: ಮಾಯಾವತಿ

ಪಿಟಿಐ
Published 21 ಆಗಸ್ಟ್ 2020, 7:06 IST
Last Updated 21 ಆಗಸ್ಟ್ 2020, 7:06 IST
ಮಾಯಾವತಿ
ಮಾಯಾವತಿ   

ಲಖನೌ: ಶಾಸಕರು ಪಕ್ಷ ರಾಜಕೀಯವನ್ನು ಬದಿಗಿಟ್ಟು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಗಮನಹರಿಸಬೇಕು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಬಿಎಸ್‌‍‍ಪಿ ಮುಖ್ಯಸ್ಥೆ ಮಾಯಾವತಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಯಾವತಿ, ’ಪಕ್ಷ ರಾಜಕೀಯವನ್ನು ಬದಿಗಿಟ್ಟು ಜನರ ಹಿತಾಸಕ್ತಿಗಾಗಿ ಜೊತೆಯಾಗಿ ಕೆಲಸ ಮಾಡಬೇಕು ಎಂದು ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರಿಗೆ ನಾನು ಮನವಿ ಮಾಡುತ್ತೇನೆ. ಸರ್ಕಾರ ಮತ್ತು ಆಡಳಿತವನ್ನು ಜವಾಬ್ದಾರಿಯುತವಾಗಿ ನಿಭಾಯಿಸೋಣ’ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಕಾರ್ಯಸೂಚಿಯಿಂದ ಅಭಿವೃದ್ಧಿಯ ವಿಷಯ ಕಾಣೆಯಾಗಿದೆ. ಆದರೆ, ನಾವು ಮಹಿಳೆಯರ ಮೇಲೆ ನಡೆಯುವ ಶೋಷಣೆ, ದಲಿತ, ಮುಸ್ಲಿಂ ಮತ್ತು ಬ್ರಾಹ್ಮಣ ಸಮುದಾಯದ ಜನರ ಹತ್ಯೆಯ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸೋಣ. ಕಾನೂನು ಸುವ್ಯವಸ್ಥೆಯನ್ನು ಮತ್ತೆ ಸರಿ ದಾರಿಗೆ ತರುವ ಕೆಲಸ ಮಾಡೋಣ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.