ಲಖನೌದಲ್ಲಿ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಜೊತೆ ಬಿಎಸ್‌ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಸಭೆ ನಡೆಸಿದರು
–ಪಿಟಿಐ ಚಿತ್ರ
ಲಖನೌ: ‘ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮಾತ್ರ ಬದ್ಧತೆ ಹೊಂದಿದ್ದು, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ರಾಜಕೀಯ ಪ್ರಾಮಾಣಿಕತೆಯ ಕೊರತೆ ಹೊಂದಿವೆ’ ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.
ಲಖನೌದಲ್ಲಿ ಉತ್ತರಪ್ರದೇಶ ಘಟಕ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘2027 ರ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಪೂರ್ಣ ಶಕ್ತಿ ಹಾಗೂ ಸಂಪನ್ಮೂಲಗಳನ್ನು ಬಳಸಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು ಎಂಬುದಾಗಿ ಕರೆ ನೀಡಿದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.